ಅಭಿಪ್ರಾಯ / ಸಲಹೆಗಳು

Crime Reported in : Mangalore East Traffic PS

ಪಿರ್ಯಾದಿದಾರರಾದ ಮಹಾಲಿಂಗ ರವರು ದಿನಾಂಕ: 25/07/2022 ರಂದು ತಮ್ಮ ಮೋಟಾರ್ ಸೈಕಲನ್ನು ಚಲಾಯಿಸಿಕೊಂಡು ರಾ.ಹೆ 66 ನೇಯದರ ನಂತೂರು ಕಡೆಯಿಂದ ಪದುವ ಕಡೆಗೆ ಹೋಗುತ್ತಿರುವಾಗ ಸದರಿ ರಸ್ತೆಯ ಎಡ ಬದಿಯಲ್ಲಿರುವ ಬಬ್ಬುಸ್ವಾಮಿ ದೇವಸ್ಥಾನದಿಂದ ಸ್ವಲ್ಪ ದೂರ ಮುಂದೆ ತಲುಪುತ್ತಿದ್ದಂತೆ ಸಂಜೆ ಸಮಯ ಸುಮಾರು 6-10 ಗಂಟೆ ವೇಳೆಗೆ ಪಿರ್ಯಾದಿದಾರರ ಹಿಂದಿನಿಂದ ಸ್ಕೂಟರ್ ನೊಂದಣಿ ಸಂಖ್ಯೆ: KA-19-MG-1147 ನೇಯದನ್ನು ಅದರ ಚಾಲಕ ಪ್ರದೀಪ್ ಎಂಬಾತನು ಪಿರ್ಯಾದಿದಾರರ ಮೋಟಾರ್ ಸೈಕಲನ್ನು ಬಲಗಡೆಯಿಂದ ಓವರ್ ಟೇಕ್ ಮಾಡಿ ಮುಂದೆ ಹೋದ ವೇಳೆ ಅವರ ಮುಂದೆಯಿಂದ ಹೋಗುತ್ತಿದ್ದ ಕಾರು ನೊಂದಣಿ ಸಂಖ್ಯೆ: KA-19-MG-1147 ನೇಯದನ್ನು ಅದರ ಚಾಲಕರು ಒಮ್ಮೆಲೆ ಬ್ರೇಕ್ ಹಾಕಿದ ಕಾರಣ ಸದ್ರಿ ಕಾರಿಗೆ ಸ್ಕೂಟರ್ ಡಿಕ್ಕಿಯಾಗುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಸ್ಕೂಟರ್ ಸವಾರನು ಆಚೆ ಈಚೆ ಓಲಾಡಿಕೊಂಡು ಕಾರಿನ ಬಲ ಹಿಂಬದಿಯ ಬಂಪರ್ ಗೆ ಡಿಕ್ಕಿಪಡಿಸಿ ನಿಯಂತ್ರಣ ತಪ್ಪಿದ ವೇಳೆ ಆತನ ಬಲ ಬದಿಯಲ್ಲಿ ಚಲಾಯಿಸಿಕೊಂಡು ಹೋಗುತ್ತಿದ್ದ ಲಾರಿ ನೊಂದಣಿ ಸಂಖ್ಯೆ: KA-26-7156 ನೇಯದನ್ನು ಅದರ ಚಾಲಕನು ನಿಯಂತ್ರಿಸದೇ ದುಡುಕುತನ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಸದರಿ ಲಾರಿಯ ಎಡ ಹಿಂಭಾಗದ ಚಕ್ರದ ಮೇಲಿನ ಬಾಡಿಯು ಸ್ಕೂಟರ್ ಸವಾರನಿಗೆ ಡಿಕ್ಕಿಯಾಗಿದ್ದರಿಂದ ಸ್ಕೂಟರ್ ಸವಾರನು ರಸ್ತೆಗೆ ಬಿದ್ದು ತಲೆಗೆ ರಕ್ತಗಾಯವಾಗಿ ಬಾಯಲ್ಲಿ ಹಾಗೂ ಕಿವಿಯಲ್ಲಿ ರಕ್ತ ಸ್ರಾವವಾಗಿದ್ದು ಪಿರ್ಯಾದಿದಾರರು ಅಲ್ಲಿದ್ದ ಸಾರ್ವಜನಿಕರೊಂದಿಗೆ ಸೇರಿ ಗಾಯಾಳುವನ್ನು ಉಪಚರಿಸಿ ಚಿಕಿತ್ಸೆ ಬಗ್ಗೆ ಎ.ಜೆ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು ಸದ್ರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಗಾಯಾಳು ದಾರಿ ಮಧ್ಯದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಆದುದರಿಂದ ಸದರಿ ರಸ್ತೆ ಅಪಘಾತ ಪಡಿಸಿದ ಲಾರಿ ಚಾಲಕ ಬಸಯ್ಯ ಎಂಬಾತನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿಕೆ, ಎಂಬಿತ್ಯಾದಿ.

crime Reported in :  Konaje PS

ಈ ಪ್ರಕರಣದ ಸಾರಾಂಶವೇನೆಂದರೆ ದಿನಾಂಕ 25.07.2022 ರಂದು ಪಿರ್ಯಾದಿದಾರರು Sharanappa Bhandari  ಇಲಾಖಾ ವಾಹನದಲ್ಲಿ ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಸಂಜೆ ಸುಮಾರು 17.30 ಗಂಟೆಗೆ  ಉಳ್ಳಾಲ ತಾಲೂಕು ಮಂಜನಾಡಿ ಗ್ರಾಮದ ಊರುಮನೆ ಎಂಬಲ್ಲಿರುವ ಜಾಮಿಯಾ ಮಸ್ಜಿದ್ – ಉಲ್- ನೂರ್ ಮಸೀದಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುತ್ತಿದ್ದ ಆರೋಪಿ ಮೊಹಮ್ಮದ್ ಶಹೀರ್ ನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಆರೋಪಿತನು ಮಾದಕ ವಸ್ತುವನ್ನು ಸೇವನೆ ಮಾಡುತ್ತಿದ್ದುದಾಗಿ ತಪ್ಪೊಪ್ಪಿಕೊಂಡ ಮೇರೆಗೆ ಸಿಬ್ಬಂದಿಯವರ ಸಹಾಯದಿಂದ ಆರೋಪಿಯನ್ನು ಮುಂದಿನ ಕ್ರಮದ ಬಗ್ಗೆ ವಶಕ್ಕೆ ಪಡೆದುಕೊಂಡು ವೈದ್ಯಕೀಯ ಪರೀಕ್ಷೆ ನಡೆಸಿ THC (ಗಾಂಜಾ) ಎಂಬ ಮಾದಕ ವಸ್ತು ಸೇವನೆ ಮಾಡಿದ ಬಗ್ಗೆ ದೃಢಪಟ್ಟ ಮೇರೆಗೆ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂಬಿತ್ಯಾದಿ.

2)  ದಿನಾಂಕ 25.07.2022 ರಂದು ಪಿರ್ಯಾದಿದಾರರು Sharanappa Bhandari  ಇಲಾಖಾ ವಾಹನದಲ್ಲಿ ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಸಂಜೆ ಸುಮಾರು 19.00 ಗಂಟೆಗೆ  ಉಳ್ಳಾಲ ತಾಲೂಕು ಮಂಜನಾಡಿ ಗ್ರಾಮದ ನಾಟೆಕಲ್ ಜಂಕ್ಷನ್ ಹತ್ತಿರವಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುತ್ತಿದ್ದ ಆರೋಪಿ ಮಹಮ್ಮದ್ ನವಾಜ್ ನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಆರೋಪಿತನು ಮಾದಕ ವಸ್ತುವನ್ನು ಸೇವನೆ ಮಾಡುತ್ತಿದ್ದುದಾಗಿ ತಪ್ಪೊಪ್ಪಿಕೊಂಡ ಮೇರೆಗೆ ಸಿಬ್ಬಂದಿಯವರ ಸಹಾಯದಿಂದ ಆರೋಪಿಯನ್ನು ಮುಂದಿನ ಕ್ರಮದ ಬಗ್ಗೆ ವಶಕ್ಕೆ ಪಡೆದುಕೊಂಡು ವೈದ್ಯಕೀಯ ಪರೀಕ್ಷೆ ನಡೆಸಿ THC (ಗಾಂಜಾ) ಎಂಬ ಮಾದಕ ವಸ್ತು ಸೇವನೆ ಮಾಡಿದ ಬಗ್ಗೆ ದೃಢಪಟ್ಟ ಮೇರೆಗೆ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂಬಿತ್ಯಾದಿ.

crime Reported in : Traffic North PS

ಪಿರ್ಯಾದಿದಾರರು Ku Shilpa M ದಿನಾಂಕ 25.07.2022 ರಂದು ಸಂಜೆ ಶಾಲೆ ಮುಗಿದ ಬಳಿಕ ಶಾಲೆಯಿಂದ  ತನ್ನ ಮನೆಗೆ ಆಟೋ ರಿಕ್ಷಾ ನಂಬ್ರ ಕೆಎ-19ಎಎ-2178 ನೇಯದರಲ್ಲಿ ಪ್ರಯಾಣಿಸುತ್ತಾ ಸಂಜೆ ಸುಮಾರು 5:20 ಗಂಟೆಗೆ ಮಂಗಳೂರು ತಾಲೂಕು, ಕೊಂಚಾಡಿ ಬ್ರಿಗೇಡ್ ಪಿನಾಕಲ್ ಅಪಾರ್ಟ್ ಮೆಂಟ್ ಬಳಿ ತಲುಪುತ್ತಿದ್ದದಂತೆಯೇ ಆಟೋ ರಿಕ್ಷಾವನ್ನು ಅದರ ಚಾಲಕ ರಮೇಶ್ ಎಂಬಾತನು ದುಡುಕುತನ ಮತ್ತು ನಿರ್ಲಕ್ಷತನದಿಂದ ಮಾನವ ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ಚಲಾಯಿಸಿಕೊಂಡು ಹೋಗಿ ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಆಟೋ ರಿಕ್ಷಾವು ರಸ್ತೆಯ ಮಧ್ಯದ ಡಿವೈಡರಿಗೆ ಢಿಕ್ಕಿ ಹೊಡದ ಪರಿಣಾಮ ಆಟೋ ರಿಕ್ಷಾವು ಎಡಕ್ಕೆ ಉರುಳಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪಿರ್ಯಾದಿದಾರರು ಕೆಳಗೆ ಬಿದ್ದ ಸಮಯ ಆಟೋ ರಿಕ್ಷಾವು ಪಿರ್ಯಾದಿದಾರರ ಎಡ ಕಾಲಿನ ಮೇಲೆ ಬಿದ್ದು ಎಡಕಾಲಿನ ಮಣಿಗಂಟಿನ ಬಳಿ ಮೂಳೆ ಮುರಿತದ ಗಂಭೀರ ಸ್ವರೂಪದ ಗಾಯ ಹಾಗೂ ಬಲಕಾಲಿನ ಮೊಣಗಂಟಿಗೆ ಎಡ ಮತ್ತು ಬಲ ಕೈಯ ಮಣಿಗಂಟಿನ ಬಳಿ ತರಚಿದ ಗಾಯವಾಗಿರುತ್ತದೆ. ಗಾಯಾಳು ಫಿರ್ಯಾದಿದಾರರು ಚಿಕಿತ್ಸೆ  ಬಗ್ಗೆ ಕುಂಟಿಕಾನ ಎ.ಜೆ. ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ” ಎಂಬಿತ್ಯಾದಿ.

crime Reported in : Traffic South PS

ಈ ಪ್ರಕರಣದ ಸಾರಾಂಶವೆನೆಂದರೆ ದಿನಾಂಕ:22-07-2022 ರಂದು ಪಿರ್ಯಾದಿದಾರರು JAYARAM  B M ಆಕ್ಟೀವಾ ಹೊಂಡಾ ನಂಬ್ರ:KA-19-HA-8933 ನೇದರ ಸವಾರನಾಗಿ ಸಹ ಸವಾರನಾಗಿ ಜನಾರ್ಧನ್ ದೇವಾಡಿಗ ಎಂಬುವರನ್ನು ಕುಳ್ಳಿರಿಸಿಕೊಂಡು ನೀರು ಮಾರ್ಗದಿಂದ ಶಕ್ತಿ ನಗರಕ್ಕೆ ಬರುತ್ತಿರುವ ಸಮಯ ಸಂಜೆ-4-00 ಗಂಟೆಗೆ ಕೆಳರಾಯಿ ಸರ್ಕಲ್ ಬಳಿ ತಲುಪುತ್ತಿದ್ದಂತೆ KA-19-C-3729 ನೇದರ ಟೆಂಪೋದ ಚಾಲಕ ಯಾವುದೇ ಮೂನ್ಸೂಚನೆ ನೀಡದೆ ಒಮ್ಮೇಲೆ ಬಲಬದಿಗೆ ಟರ್ನ್ ಮಾಡಿದಾಗ ಪಿರ್ಯಾದಿದಾರರು ಮತ್ತು ಸಹ ಸವಾರನು ಆಕ್ಟಿವಾ ಹೊಂಡಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಿರ್ಯಾದಿದಾರರು ಮತ್ತು ಸಹ ಸವಾರ ಜನಾರ್ಧನ ದೇವಾಡಿಗ ರವರು ರಸ್ತೆಗೆ ಬಿದ್ದು ಸಹ ಸವಾರ ಜನಾರ್ಧನ್ ದೇವಾಡಿಗ ರವರಿಗೆ ಎಡಗಾಲಿಗೆ ಮೂಳೆ ಮುರಿತದ ಗಾಯವಾಗಿದ್ದು ಕೂಡಲೇ ಅಲ್ಲಿ ಸೇರಿದ ಜನರು ಮತ್ತು ಪಿರ್ಯಾದಿದಾರರು ಚಿಕಿತ್ಸೆ ಬಗ್ಗೆ ನಗರದ ಸಿಟಿ ಆಸ್ಪತ್ರೆಗೆ ಕರೆದುಕೊಂಡು ದಾಖಲಿಸಿದ್ದು ಪಿರ್ಯಾದಿದಾರರು ಮತ್ತು ಟೆಂಪೋದ ಚಾಲಕ ಪರಸ್ಪರ ರಾಜಿ ಮಾಡಿಕೊಳ್ಳುವುದಾಗಿ ನಿರ್ಧರಿಸಿದ್ದು ಸದ್ರಿ ರಾಜಿ ಮಾತುಕತೆ ವಿಫಲಗೊಂಡಿದ್ದರಿಂದ  ಈ ದೂರನ್ನು ನೀಡಲು ತಡವಾಗಿರುತ್ತದೆ ಎಂಬಿತ್ಯಾದಿ.

2) ದಿನಾಂಕ:25-07-2022 ರಂದು ಪಿರ್ಯಾದಿದಾರರು SATHISH  ಬೆಳಗ್ಗೆ ಇಲಾಖಾ ವಾಹನ ಸಂಖ್ಯೆ KA-19-G-0968 ನೇದರಲ್ಲಿ ಪಿರ್ಯಾದಿದಾರರು ಚಾಲಕರಾಗಿ  ತಾಲ್ಲೂಕು ಆರೋಗ್ಯಧಿಕಾರಿ ಡಾ|| ಸುಜಯ್ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ|| ದೀಪ ಪ್ರಭು ರವರನ್ನು ಸಹ ಪ್ರಯಾಣಿಕರಾಗಿ ಕುಳ್ಳರಿಸಿಕೊಂಡು ಗಂಜಿ ಮಠದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೀಟಿಂಗ್ ಮುಗಿಸಿಕೊಂಡು ಮಂಗಳೂರು ಕಡೆಗೆ ಜೀಪನ್ನು ಚಲಾಯಿಸಕೊಂಡು ಬರುತ್ತಿರುವಾಗ ಸಮಯ ಸುಮಾರು ಮಧ್ಯಾಹ್ನ 2.00 ಗಂಟೆಗೆ ಕುಡುಪು ಶಾಲೆಯ ಹತ್ತಿರ ತಿರುಗಿ ರಸ್ತೆ ಬಳಿ ತಲುಪಿದಾಗ ಪಿರ್ಯಾದಿದಾರರ ಎದುರಿನಿಂದ ಅಂದರೆ ಮಂಗಳೂರು ಕಡೆಯಿಂದ ವಾಮಂಜೂರು ಕಡೆಗೆ KA-19-AD-2290 ನೇದರ ಪಿಕಪ್ ವಾಹನವನ್ನು ಉಸ್ಮಾನ್ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷತನದಿಂದ ರಸ್ತೆಯ ತೀರ ಬಲಬದಿಗೆ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರು ಚಲಾಯಿಸುತ್ತಿದ್ದ ಇಲಾಖಾ ವಾಹನದ ಎದುರಿನ ಬಲ ಸೇಪಿಗೆ ಡಿಕ್ಕಿ ಹೊಡೆಸಿದ ಪರಿಣಾಮ ಪಿರ್ಯಾದಿದಾರರ ತಲೆಯ ಬಲಬದಿಗೆ ಗುದ್ದಿದ ಗಾಯ, ಹಾಗೂ ಎಡಕೈಗೆ ತರಚಿದ ಗಾಯವಾಗಿರುತ್ತದೆ, ಹಾಗೂ ಡಾ|| ದೀಪ ಪ್ರಭುರವರಿಗೆ ಎಡ ಭುಜಕ್ಕೆ ಮೂಳೆ ಮುರಿತದ ಗಾಯ ಮತ್ತು  ಡಾ|| ಸುಜಯ್ ರವರಿಗೆ ಬಲಗೈಗೆ ಗುದ್ದಿದ ಗಾಯವಾಗಿದ್ದು, ಚಿಕಿತ್ಸೆ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ|| ಚಿರಾಗ್ ರವರು ಅವರ ಕಾರಿನಲ್ಲಿ ಕೊಡಿಯಾಲ್ ಬೈಲ್ ಯೆನೆಪೋಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು  ಅಲ್ಲಿನ ವೈದ್ಯರು ಪರೀಕ್ಷಿಸಿ  ಪಿರ್ಯಾದಿದಾರರನ್ನು ಹಾಗೂ ಡಾ|| ದೀಪ ಪ್ರಭು ರವರನ್ನು  ಒಳರೋಗಿಯಾಗಿ ದಾಖಲಿಸಿಕೊಂಡು  ಡಾ|| ಸುಜಯ್ ರನ್ನು ಹೊರರೋಗಿಯಾಗಿ ಚಿಕಿತ್ಸೆ ನೀಡಿರುವುದಾಗಿದೆ, ಎಂಬಿತ್ಯಾದಿ.

ಇತ್ತೀಚಿನ ನವೀಕರಣ​ : 26-07-2022 07:42 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080