ಅಭಿಪ್ರಾಯ / ಸಲಹೆಗಳು

Crime Reported in Traffic South Police Station      

ದಿನಾಂಕ: 07-01-2022 ರಂದು ಪಿರ್ಯಾದಿ SMT KARMINE TELLIS ದಾರರು ಅವರ ನೆರೆ ಮನೆಯ ಮಗುವಿನ ಕ್ರಿಸ್ತ ಪ್ರಸಾದ ಕಾರ್ಯಕ್ರಮವು ತೊಕ್ಕೊಟ್ಟಿನ ಚರ್ಚ್ ಹಾಲ್ ನಲ್ಲಿ ಇದ್ದು ಆ ಕಾರ್ಯಕ್ರಮಕ್ಕೆ ಹೋಗಿ ಕಾರ್ಯ ಕ್ರಮ ಮುಗಿಸಿ ವಾಪಾಸ್ಸು ಅವರ ಮನೆ ಕಡೆಗೆ ಅಂದರೆ ತೊಕ್ಕೊಟು ಕಡೆಯಿಂದ  ಮದನಿ ಶಾಲೆ ಕಡೆಗೆ ರಸ್ತೆಯ ಎಡ ಬದಿಯಲ್ಲಿ ನಡೆದುಕೊಂಡು ಬರುತ್ತಿರುವ ಸಮಯ ಸುಮಾರು ರಾತ್ರಿ 10-00 ಗಂಟೆಗೆ ಉಳ್ಳಾಲದ ಸಬರ್ ಕ್ಲಬ್ ರಸ್ತೆ ಬಳಿ ತಲುಪುತ್ತಿದ್ದಂತೆ ಅವರ ಎದುರಿನಿಂದ ಅಂದರೆ ಡೈಮಂಡ್ ರಸ್ತೆ ಕಡೆಯಿಂದ ತೊಕ್ಕೊಟ್ಟು ಕಡೆಗೆ ಸ್ಕೂಟರ್ ನಂಬ್ರ:KA-19-HC-0110 ನೇದರ ಸವಾರ ಕಿಶೋರ್ ವೇಗಸ್ ಎಂಬಾತನುದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬಂದು ರಸ್ತೆ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಿರ್ಯಾದಿದಾರರಿಗೆ ಸ್ಕೂಟರ್ ನ್ನು ಡಿಕ್ಕಿ ಪಡಿಸಿದ ಪರಿಣಾಮ ಅವರು ಹಾಗೂ ಸ್ಕೂಟರ್ ಸವಾರ ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ಪರಿಣಾಮ ಪಿರ್ಯಾದಿದಾರರ ಎಡಗೈ ಭುಜದ ಹತ್ತಿರ ಮೂಳೆ ಮುರಿತದ ಗಾಯ ಹಾಗೂ ಹಣೆಯ ಬಲಬದಿಗೆ ಗುದ್ದಿದ ರೀತಿಯ  ಗಾಯವಾಗಿದ್ದು ಸ್ಕೂಟರ್ ಸವಾರನಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಅಲ್ಲಿ ಸೇರಿದ ಜನರು ಚಿಕಿತ್ಸೆ ಬಗ್ಗೆ ಪಿರ್ಯಾದಿದಾರರನ್ನು ಕಂಕನಾಡಿ ಪಾಧರ್ ಮುಲ್ಲರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿರುತ್ತಾರೆ ಎಂಬಿತ್ಯಾದಿ.

 

ಇತ್ತೀಚಿನ ನವೀಕರಣ​ : 08-01-2022 01:58 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080