ಅಭಿಪ್ರಾಯ / ಸಲಹೆಗಳು

Crime Reported in Mangalore East Traffic PS

 ದಿನಾಂಕ: 28-04-2022 ರಂದು ಸಂಜೆ ಪಿರ್ಯಾದಿದಾರರಾದ ತುಳಸಿದಾಸ್ ರವರು ತನ್ನ ಬಾಬ್ತು KA-19-B-4045 ನಂಬ್ರದ ಅಟೋರಿಕ್ಷಾದಲ್ಲಿ ತನ್ನ ಪತ್ನಿ ಶ್ರೀಮತಿ ಪ್ರಿಯಾರವರನ್ನು ಹಿಂಬದಿ ಸವಾರರನ್ನಾಗಿ ಕುಳ್ಳಿರಿಸಿಕೊಂಡು ಲಾಲ್ ಭಾಗ್ ಗೆ ಹೋಗಲು ಬಿಜೈ ಜಂಕ್ಷನ್ ಕಡೆಯಿಂದ ಕೆ.ಎಸ್.ಆರ್.ಟಿ.ಸಿ ಕಡೆಗೆ ಹಾದು ಹೋಗಿರುವ ಸಾರ್ವಜನಿಕ ಕಾಂಕ್ರೀಟ್ ರಸ್ತೆಯಲ್ಲಿ ಅಟೋರಿಕ್ಷಾವನ್ನು ಚಲಾಯಿಸಿಕೊಂಡು ಹೋಗುತ್ತಾ ಸಂಜೆ 4-40 ಗಂಟೆಗೆ ಬಿಜೈ ರಂಗೋಲಿ ಕ್ರಾಸ್ ಬಳಿಗೆ ತಲುಪುತ್ತಿದ್ದಂತೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ KA-19-MA-6103 ನಂಬ್ರದ ಮಾರುತಿ ಓಮ್ನಿ ಕಾರಿನ ಚಾಲಕ ಮೊಹಮ್ಮದ್ ಫಯಾಜ್ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷತನದಿಂದ ಒಮ್ಮೆಲೇ ಕಾರಿನ ಮುಂದಿನ ಬಲಬದಿಯ ಡೋರನ್ನು ತೆರೆದು ಪಿರ್ಯಾದಿದಾರರು ಚಲಾಯಿಸಿಕೊಂಡಿದ್ದ ಅಟೋರಿಕ್ಷಾದ ಎಡಭಾಗಕ್ಕೆ ಢಿಕ್ಕಿಪಡಿಸಿದ್ದು, ಢಿಕ್ಕಿಯ ಪರಿಣಾಮ ಅಟೋರಿಕ್ಷಾ ಕಾಂಕ್ರೀಟ್ ರಸ್ತೆಗೆ ಮಗುಚಿಬಿದ್ದು, ಪಿರ್ಯಾದಿದಾರರ ಬಲಕಾಲಿನ ಪಾದದ ಹಿಮ್ಮಡಿಯ ಭಾಗಕ್ಕೆ ಗುದ್ದಿದ ಗಾಯವಾಗಿದ್ದು, ಪಿರ್ಯಾದಿದಾರರ ಪತ್ನಿ ಶ್ರೀಮತಿ ಪ್ರಿಯಾ ರವರಿಗೆ ತಲೆಯ ಎಡಭಾಗಕ್ಕೆ ಗುದ್ದಿದ ಗಾಯ ಮತ್ತು ಎಡಕೈ ಮೊಣಕೈಗೆ ತರಚಿದ ಗಾಯವಾಗಿದ್ದು ಎ.ಜೆ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆದುಕೊಂಡಿರುವುದಾಗಿದೆ. ನಂತರ ಮರುದಿನ ಪಿರ್ಯಾದಿದಾರರ ಬಲಕಾಲಿನ ಹಿಮ್ಮಡಿ ಭಾಗದಲ್ಲಿ ರಕ್ತ ಬರಲು ಪ್ರಾರಂಭವಾಗಿದ್ದು, ವೆನ್ಲಾಕ್ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿಕೊಂಡಲ್ಲಿ ಬಲಕಾಲಿನ ಪಾದದ ಗಂಟಿಗೆ ಮತ್ತು ಹಿಮ್ಮಡಿಯ ಮೇಲ್ಭಾಗದ ಮೂಳೆಗೆ ಮೂಳೆ ಮುರಿತದ ಗಂಭೀರ ಸ್ವರೂಪದ ಗಾಯವಾಗಿರುವುದಾಗಿ ತಿಳಿದು ಬಂದಿದ್ದು, ಪ್ರಸ್ತುತ ವೆನ್ಲಾಕ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಒಳರೋಗಿಯಾಗಿ ಚಿಕಿತ್ಸೆಯಲ್ಲಿರುವುದಾಗಿದೆ. ಈ ಅಪಘಾತದ ಬಗ್ಗೆ ಆರೋಪಿ ಕಾರು ಚಾಲಕನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಕೋರಿಕೆ.

ಇತ್ತೀಚಿನ ನವೀಕರಣ​ : 12-05-2022 07:44 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080