ಅಭಿಪ್ರಾಯ / ಸಲಹೆಗಳು

Crime Reported in Traffic North Police Station

ಪಿರ್ಯಾದಿದಾರರ Yogish ಭಾವನಾದ ಬಾಲಕೃಷ್ಣ (48ವರ್ಷ) ಈ ದಿನ ದಿನಾಂಕ: 13-06-2022- ರಂದು ಬೆಳಿಗ್ಗೆ ಸ್ಕೂಟರ್ ನಂಬ್ರ KA-19-EJ-8691 ದರಲ್ಲಿ ತನ್ನ ಮಗುವನ್ನು ಶಾಲೆಗೆ ಬಿಡಲೆಂದು ಹಳೆಯಂಗಡಿ ಜಂಕ್ಷನ್ ಬಳಿ ಬಿಟ್ಟು ಬಸ್ ಹತ್ತಿಸಿ ಕೋಸ್ಟಲ್ ಬಾರ್ ಬಳಿಯ ಗೂಡಂಗಡಿಗೆ ಹೋಗಿ ಮರಳಿ ಮನೆಗೆ ಬರಲು ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ರಸ್ತೆಯನ್ನು ದಾಟಿ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ರಸ್ತೆಯ ಅಂಚಿಗೆ ಬೆಳಿಗ್ಗೆ 07:10 ಗಂಟೆಗೆ ತಲುಪಿದಾಗ KA-20-C-6557 ನಂಬ್ರದ ಗೂಡ್ಸ್ ವಾಹನವನ್ನು ಅದರ ಚಾಲಕ ಬಸಪ್ಪ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಮಾನವ ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ರಸ್ತೆಯ ತೀರಾ ಎಡ ಬದಿಗೆ ಚಲಾಯಿಸಿಕೊಂಡು ಬಂದು ಬಾಲಕೃಷ್ಣ ರವರು ಸವಾರಿ ಮಾಡುತ್ತಿದ್ದ ಸ್ಕೂಟರಿಗೆ ಡಿಕ್ಕಿ ಪಡಿಸಿದ ಪರಿಣಾಮ ಸ್ಕೂಟರ್ ರಸ್ತೆಯಲ್ಲಿ ಎಳೆದುಕೊಂಡು ಹೋಗಿ ಬಾಲಕೃಷ್ಣ ರವರ ಬಲಕೈ ಮಣಿಗಂಟಿಗೆ, ಬಲ ತೊಡೆಗೆ, ಎಡ ಕಾಲಿನ ಪಾದದ ಬಳಿ ಮತ್ತು ತಲೆಗೆ ಗಂಭೀರ ಸ್ವರೂಪದ ರಕ್ತಗಾಯವಾಗಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿಕಿತ್ಸೆ ಬಗ್ಗೆ ಮುಕ್ಕ ಶ್ರೀನಿವಾಸ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ.

 

Crime Reported in : Moodabidre PS

ದಿನಾಂಕ: 12-06-2022 ರಂದು ಪಿರ್ಯಾದಿದಾರರ AJAY ತಂದೆಯಾದ ವಿಠಲ್ ರವರು ಬೆಳುವಾಯಿ ಜಂಕ್ಷನ್ ಹತ್ತಿರವಿರುವ ಜಾಮೀಯಾ ಮಸೀದಿ ಕ್ರಾಸ್ ರಸ್ತೆಯ ಬಳಿಯಲ್ಲಿ ಸಮಯ ಸುಮಾರು 12.45 ಗಂಟೆಗೆ ನಿಂತುಕೊಂಡಿರುವಾಗ ಬೆಳುವಾಯಿ ಪೇಟೆ ಕಡೆಯಿಂದ ಕೆ.ಎ-19-ಎಮ್.ಡಿ-6562  ನಂಬ್ರದ ಕಾರನ್ನು ಅದರ ಚಾಲಕ ಸುಧಾಕರ ಎಂಬಾತನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಮಾನವ ಜೀವಕ್ಕೆ ಅಪಾಯಕಾರಿಯಾಗುವ ರೀತಿಯಲ್ಲಿ ಚಲಾಯಿಸಿಕೊಂಡು ಬಂದು ಯಾವುದೇ ಸೂಚನೆಯನ್ನು ನೀಡದೇ ಶಾದಿ ಮಹಲ್ ಕಡೆಗೆ ತಿರುಗಿಸಿ ರಸ್ತೆ ಬದಿಯಲ್ಲಿ ನಿಂತಿದ್ದ ಪಿರ್ಯಾದಿದಾರರ ತಂದೆಯಾವರಾದ ವಿಠಲ್ ರವರಿಗೆ ಡಿಕ್ಕಿ ಪಡಿಸಿದ ಪರಿಣಾಮ ಅವರು ರಸ್ತೆಗೆ ಬಿದ್ದು ಅವರ ಬಲಕೋಲು ಕಾಲಿಗೆ ಮೂಳೆ ಮುರಿತದ ಗಾಯವುಂಟಾಗಿ ಮೂಡಬಿದ್ರೆಯ ಮೌಂಟ್ ರೋಸರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿರುವುದಾಗಿದೆ ಎಂಬಿತ್ಯಾದಿ.

 

ಇತ್ತೀಚಿನ ನವೀಕರಣ​ : 13-06-2022 07:48 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080