ಅಭಿಪ್ರಾಯ / ಸಲಹೆಗಳು

Crime Reported in Traffic North Police Station   

ದಿ: 16-06-2022 ರಂದು ಸಂಜೆ 5:15 ಗಂಟೆಗೆ ಪಿರ್ಯಾದಿ Mahammed Shareef ದಾರರ ತಮ್ಮ ಅಬೂಬಕ್ಕರ್ ಸಿದ್ದಿಕ್ ಎಂಬವರು ವಿದ್ಯಾನಗರ ಕಡೆಯಿಂದ ಹಮೀದ್ ರವರ ಗುಜರಿ ಅಂಗಡಿ ಎದುರಿನಲ್ಲಿ ರಸ್ತೆಯ ತೀರಾ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಮಯ ಕೂಳೂರು ಕಡೆಯಿಂದ ಕಾವೂರು ಕಡೆಗೆ KA-51-AF-7298 ನೇ ನಂಬ್ರ ದ ಮಾಸ್ಟರ್ ಎಂಬ ಹೆಸರಿನ ಖಾಸಗಿ ಬಸ್ಸನ್ನು ಅದರ ಚಾಲಕ ಸಂತೋಷ್ ಎಂಬವರು ದುಡುಕುತನ ಮತ್ತು ನಿರ್ಲಕ್ಷತನದಿಂದ ಮಾನವ ಜೀವಕ್ಕೆ ಅಪಾಯ ಉಂಟು ಮಾಡುವ ರೀತಿಯಲ್ಲಿ ರಸ್ತೆಯ ತೀರಾ ಬಲ ಬದಿಗೆ ಚಲಾಯಿಸಿಕೊಂಡು ಬಂದು ಡಿಕ್ಕಿ ಪಡಿಸಿದ ಪರಿಣಾಮ ಪಿರ್ಯಾದಿದಾರರ ತಮ್ಮ ಅಬೂಬಕ್ಕರ್ ಸಿದ್ದಿಕ್ ರವರ ಬಲ ಭುಜಕ್ಕೆ, ಬಲ ಕುತ್ತಿಗೆಯ ಬಳಿ ಗುದ್ದಿದ ನಮೂನೆಯ ಗಾಯವಾಗಿ ಊದಿಕೊಂಡಿದ್ದಲ್ಲದೇ, ಬಲ ಎದೆಯ ಬಳಿ ಗುದ್ದಿದ ಗಾಯವಾಗಿ ಎ.ಜೆ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ ಎಂಬಿತ್ಯಾಧಿಯಾಗಿರುತ್ತದೆ.

Crime Reported in Moodabidre PS

ಪಿರ್ಯಾದಿsudeep mv PSI ದಾರರು ಮತ್ತು ಠಾಣಾ ಸಿಬ್ಬಂದಿಯವರೊಂದಿಗೆ ಠಾಣಾ ಸರಹದ್ದಿನಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ 12.30 ಗಂಟೆಗೆ ಮೂಡಬಿದ್ರೆ ತಾಲೂಕು ಮಾರ್ಪಾಡಿ ಗ್ರಾಮದ ಕೋಟೆಬಾಗಿಲು ಬಳಿಯಲ್ಲಿರುವ ನಿರ್ಜನ ಪ್ರದೇಶದಲ್ಲಿ ಒಬ್ಬ ವ್ಯಕ್ತಿ ಗಾಂಜಾ ಸೇವನೆ ಮಾಡುತ್ತಿದ್ದಾರೆ ಎಂಬುದಾಗಿ ಬಾತ್ಮೀದಾರರಿಂದ ಖಚಿತ ಮಾಹಿತಿ ಬಂದ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ಮಾಡಿದಾಗ 1) ಹಿತೇಶ್ (18) ವಾಸ: ಶ್ರೀ ಗಣೇಶ್ ಬೋವಿಕೆರಿ, ಆಳ್ವಾಸ್ ರೋಡ್ ಮಾರ್ಪಾಡಿ ರಸ್ತೆ ಮೂಡಬಿದ್ರೆ ತಾಲೂಕು ಎಂಬವರನ್ನು ದಿನಾಂಕ: 16-06-2022 ರಂದು 12.45 ಗಂಟೆಯ ಸಮಯಕ್ಕೆ ವಶಕ್ಕೆ ಪಡೆದಲ್ಲಿ ಇವನು ಯಾವುದೋ ಅಮಲು ಪದಾರ್ಥ ಸೇವಿಸಿದ ರೀತಿಯಲ್ಲಿ ಕಂಡು ಬಂದುದರಿಂದ ಇವರನ್ನು ವೈದ್ಯಾಧಿಕಾರಿಯವರು, ಎ. ಜೆ ಆಸ್ಪತ್ರೆ ಕುಂಟಿಕಾನ, ಮಂಗಳೂರು ತಾಲೂಕು ಇಲ್ಲಿ ತಪಾಸಣೆಗೊಳಪಡಿಸಿದಾಗ ಈತನು ಗಾಂಜಾ ಸೇವಿಸಿರುವ ಬಗ್ಗೆ ದೃಡಪಟ್ಟಿದ್ದರಿಂದ ಈತನ ವಿರುದ್ಧ ಕಾನೂನು ಕ್ರಮ ಕೈಗೊಂಡಿರುವುದಾಗಿದೆ  ಎಂಬಿತ್ಯಾದಿ.

 

ಇತ್ತೀಚಿನ ನವೀಕರಣ​ : 17-06-2022 06:02 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080