ಅಭಿಪ್ರಾಯ / ಸಲಹೆಗಳು

Crime Reported in Konaje PS

ಪಿರ್ಯಾದಿ Shivaji ದಾರರ ಹೆಂಡತಿ ರಾಧ(48 ವರ್ಷ) ರವರು ದಿನಾಂಕ 20.04.2022 ರಂದು ಬೆಳಗ್ಗೆ ಮಗ ಪ್ರಶಾಂತನೊಂದಿಗೆ ಮಂಜನಾಡಿ ಗ್ರಾಮದ ನಾಟೆಕಲ್ ವರೆಗೆ ಬೈಕ್ ನಲ್ಲಿ ಬಂದು, ನಂತರ ಸುಮಾರು 9 ಗಂಟೆಗೆ ನಾಟೆಕಲ್ ನಿಂದ ಮಂಗಳೂರಿಗೆ ಹೋಗುವ ಬಸ್ಸನ್ನು ಹತ್ತಿ ಬಟ್ಟೆ ತರುತ್ತೇನೆಂದು ಹೋದವರು ಸಂಜೆಯಾದರೂ ಮನೆಗೆ ಬಾರದೇ ಇರುವುದರಿಂದ ಪಿರ್ಯಾದಿದಾರರು ಹಲವು ಕಡೆಗಳಲ್ಲಿ ಹುಡುಕಾಡಿ ಮತ್ತು ಸಂಬಂಧಿಕರಲ್ಲಿ ವಿಚಾರಿಸಿದಾಗಲೂ ಪತ್ತೆಯಾಗದಿರುವುದರಿಂದ ಈ ದಿನ ಠಾಣೆಗೆ ಬಂದು ಕಾಣೆಯಾದ ರಾಧರವರನ್ನು ಹುಡುಕಿಕೊಡಬೇಕೆಂದು ದೂರು ನೀಡಿರುತ್ತಾರೆ ಎಂಬಿತ್ಯಾದಿ.

Crime Reported in Mangalore West Traffic PS                       

ಫಿರ್ಯಾದಿದಾರರಾದ ರಾಮಚಂದ್ರ ಕುಲಾಲ್ ರವರು ದಿನಾಂಕ: 22-04-2022 ರಂದು ಬೆಳಿಗ್ಗೆ ಸಮಯ ಸುಮಾರು 09-30 ಗಂಟೆಗೆ ಅವರ ಪತ್ನಿಯ ಬಾಬ್ತು ಕೆಎ 19 ಇಹೆಚ್ 4110 ನೇ ದ್ವಿ ಚಕ್ರ ವಾಹನವನ್ನು  ಕೋಡಿಕಲ್ ಕಡೆಯಿಂದ ಕೊಡಿಕಲ್ ಕ್ರಾಸ್ ಕಡೆಗೆ ಸಾರ್ವಜನಿಕ ರಸ್ತೆಯಲ್ಲಿ ಚಲಾಯಿಸಿಕೊಂಡು ಹೋಗುತ್ತಿರುವಾಗ ಕೊಡಿಕಲ್ ಬೋಲ್ದೋಟ ಕ್ರಾಸ್ ಬಳಿ ತಲುಪುತ್ತಿದ್ದಂತೆ ಕೋಡಿಕಲ್ ಕ್ರಾಸ್ ಕಡೆಯಿಂದ ಕೊಡಿಕಲ್ ಬೋಲ್ದೋಟ ಕ್ರಾಸ್ ಕಡೆಗೆ ಕೆಎ 19 ಎಇ 5330 ನೇ ಟಿಪ್ಪರ್ ಲಾರಿ ಚಾಲಕನು ಸಾರ್ವಜನಿಕ ರಸ್ತೆಯಲ್ಲಿ ತೀರಾ ನಿರ್ಲಕ್ಷ್ಯತನದಿಂದ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಫಿರ್ಯಾದಿದಾರರು ಚಲಾಯಿಸುತ್ತಿದ್ದ ದ್ವಿಚಕ್ರ  ವಾಹನದ ಮುಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಫಿರ್ಯಾದಿದಾರರು ದ್ವಿ ಚಕ್ರ ವಾಹನ ಸಮೇತ ರಸ್ತೆಗೆ ಎಸೆಯಲ್ಪಟ್ಟು ಫಿರ್ಯಾದಿದಾರರ ಬಲಕಾಲಿನ ಕೋಲು ಕಾಲಿಗೆ ಮೂಳೆ ಮುರಿತದ ಗಾಯ ಹಾಗೂ ಬಲ ಕೈ ತಟ್ಟಿಗೆ ಗುದ್ದಿದ ನಮೂನೆಯ ಗಾಯವಾಗಿದ್ದು, ಅದೇ ರಸ್ತೆಯಲ್ಲಿ ಬರುತ್ತಿದ್ದ ಫಿರ್ಯಾದಿದಾರರ ಸ್ನೇಹಿತರಾದ ನಾರಾಯಣರವರು ಫಿರ್ಯಾದಿದಾರರನ್ನು ಉಪಚರಿಸಿ, ಅವರ ಅಟೋ ರಿಕ್ಷಾದಲ್ಲಿ ಎ.ಜೆ. ಅಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಅಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಸರಕಾರಿ ಜಿಲ್ಲಾ ವೆನ್ಲಾಕ್ ಅಸ್ಪತ್ರೆಗೆ ಕರೆದುಕೊಂಡು ಬಂದಲ್ಲಿ ಪರೀಕ್ಷಿಸಿದ ವೈದ್ಯರು ಒಳರೋಗಿಯಾಗಿ ದಾಖಲು ಮಾಡಿರುತ್ತಾರೆ. ಈ ಅಪಘಾತಕ್ಕೆ ಕೆಎ 19 ಎಇ 5330ನೇ ಲಾರಿಯನ್ನು ಅದರ ಚಾಲಕ ಪಾರಪ್ಪ  ಸಾರ್ವಜನಿಕ ರಸ್ತೆಯಲ್ಲಿ ನಿರ್ಲಕ್ಷತನಕದಿಂದ ಹಾಗೂ ಅಜಾಗರೂಕತೆಯಿಂದ ಚಲಾಯಿಸಿರುವುದೇ ಕಾರಣವಾಗಿರುತ್ತದೆ ಎಂಬಿತ್ಯಾದಿ.

ಇತ್ತೀಚಿನ ನವೀಕರಣ​ : 23-04-2022 05:51 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080