ಅಭಿಪ್ರಾಯ / ಸಲಹೆಗಳು

Mangalore Rural PS

ಈ ಪ್ರಕರಣದ ಸಾರಂಶವೇನೆಂದರೆ ದಿನಾಂಕ: 04-01-2024  ರಂದು ಪಿರ್ಯಾದಿ Arun Kumar D

ದಾರರು ಠಾಣಾ ಸರಹದ್ದಿನಲ್ಲಿ ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿ ಮಂಗಳೂರು ತಾಲೂಕು  ಅಡ್ಯಾರ್ ಗ್ರಾಮದ ಅಡ್ಯಾರ್ ಎಂಬಲ್ಲಿ ಅಮಲು ಪದಾರ್ಥ ಸೇವನೆ  ಮಾಡಿದಂತೆ ಕಂಡು ಬಂದ ರಕ್ಷಿತ್ (30ವರ್ಷ), ವಾಸಗುರುಕೃಪ ನಿಲಯ, ಪಣಿಯೂರು ಪೋಸ್ಟ್, ಬೆಳಪು, ಉಡುಪಿ ಜಿಲ್ಲೆ ಎಂಬಾತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆರೋಪಿತನು ಮಾದಕ ವಸ್ತು ಸೇವನೆ ಮಾಡಿದ ಬಗ್ಗೆ ದೃಢಪಟ್ಟಂತೆ ಆರೋಪಿತನ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಎಂಬಿತ್ಯಾದಿ

 

Mangalore North PS

ಈ ಪ್ರಕರಣದ ಸಂಕ್ಷಿಪ್ತ ಸಾರಾಂಶವೆನೆಂದರೆ, ಈ ದಿನ ದಿನಾಂಕ: 04.01.2024 ರಂದು  ಸಂಜೆ ಸಮಯ ಮಾದಕ ದ್ರವ್ಯ ವ್ಯಸನ ಮತ್ತು ಮಾರಾಟವನ್ನು ತಡೆಗಟ್ಟುವ ಮತ್ತು ನಿಯಂತ್ರಿಸುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಕೇಂದ್ರ ಉಪವಿಭಾಗದ ವತಿಯಿಂದ ರಚಿತವಾಗಿರುವ Anti Drug Team ತಂಡದ ಅಧಿಕಾರಿ ಪ್ರದೀಪ್ ಟಿ ಆರ್ ಪಿ.ಎಸ್.ಐ ಮಂಗಳೂರು ಉತ್ತರ ಪೊಲೀಸ್ ಠಾಣೆ ಆದ ನಾನು Anti Drug Team  ನ ಸಿಬ್ಬಂದಿ ರವರೊಂದಿಗೆ ರೌಂಡ್ಸ ಕರ್ತವ್ಯ ದಲ್ಲಿರುವ ಸಮಯ ಮಂಗಳೂರು ನಗರದ  ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಕೋರ್ಟ ಆವರಣದ ಬಳಿ ತಲುಪಿದಾಗ ಒಬ್ಬಾತನು ಅಮಲು ಪದಾರ್ಥ ಸೇವಿಸಿದ ಹಾಗೆ ತೂರಾಡುತ್ತಿದ್ದು ಆತನನ್ನು ಕಂಡು ನಾವು ವಿಚಾರಿಸಲಾಗಿ ಬಾಯಿಂದ ಗಾಂಜಾ ಸೇವನೆ ಮಾಡಿದ ವಾಸನೆ ಬರುತ್ತಿದ್ದು, ನಾಲಿಗೆ ತೊದಲುತ್ತಾ ತನ್ನ ಹೆಸರು: ದೀಕ್ಷಿತ್ ಪ್ರಾಯ: 24 ವರ್ಷ, ಯಾನೆ ಪೀಟರ್ ಮೊಂತೆರೋ ವಾಸ: ಜಯಂತಿ ನಾಯಕ ಕಂಪೌಂಡ್, ತೋಟಾ ಬೇಂಗ್ರೆ, ಕೂಳೂರು, ಮಂಗಳೂರು  ಎಂಬುದಾಗಿ ತಿಳಿಸಿದ್ದು. ಅವರ ವೈದ್ಯಕೀಯ ಪರೀಕ್ಷೆ ಬಗ್ಗೆ ಮಂಗಳೂರು ಕುಂಟಿಕಾನದ ಎ ಜೆ ಆಸ್ಪತ್ರೆಗೆ ಹಾಜರುಪಡಿಸಿದ್ದು,  ಎ ಜೆ ಆಸ್ಪತ್ರೆಯ ವೈದ್ಯರು ಆತನನ್ನು ಪರೀಕ್ಷಿಸಿದಲ್ಲಿ, ದೀಕ್ಷಿತ್ ಎಂಬಾತನು Tetrahydracannabinoid, (Marijuana) ಮತ್ತು Methamphetamine ಎಂಬ ಮಾದಕ ದ್ರವ್ಯವನ್ನು ಸೇವನೆ ಮಾಡಿರುವುದಾಗಿ ದೃಢ ಪತ್ರವನ್ನು ನೀಡಿರುತ್ತಾರೆ ನಂತರ ಠಾಣೆಗೆ ಕರೆತಂದು ದೀಕ್ಷಿತ್ ನ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಎಂಬಿತ್ಯಾದಿ

 

Konaje PS

ಈ ಪ್ರಕರಣದ ಸಾರಾಂಶವೇನೆಂದರೆ ದಿನಾಂಕ:04-01-2024 ರಂದು ಪಿರ್ಯಾದಿದಾರರು ಇಲಾಖಾ ವಾಹನದಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ, ಉಳ್ಳಾಲ ತಾಲೂಕು ಬೆಳ್ಮ ಗ್ರಾಮದ ರೆಂಜಾಡಿ ಬಯಲು ಮೈದಾನದ ಬಳಿ   ಅಮಲು ಪದಾರ್ಥ ಸೇವನೆ ಮಾಡಿ ನಶೆಯಲ್ಲಿದ್ದಂತೆ ಕಂಡು ಬಂದ ಕೌಶಿಕ್ ಪಿ ಸುವರ್ಣ, ಪ್ರಾಯ 39 ವರ್ಷ, ವಾಸ : ಗ್ರೀನ್ ಹಿಲ್, ಅಪಾರ್ಟ್ ಮೆಂಟ್, ಬಿಜೈ, ಕಾಪಿಕಾಡ್, 1ನೇ ಕ್ರಾಸ್, ಪೆಟ್ರೋಲ್ ಬಂಕ್ ನ ಹತ್ತಿರ, ಮಂಗಳೂರು ಹಾಗೂ  ಪ್ರವೀಣ್ ಪೂಜಾರಿ, ಪ್ರಾಯ:34 ವರ್ಷ, , ಖಾಯಂ ವಿಳಾಸ : ನೆಲ್ಲಿಕಾರು,ವಲ್ಪಾಡಿ ಹಾಲಿ ವಾಸ:ಕುಂಟಿಕಾನ್, ಮಂಗಳೂರು ಎಂಬಾತರನ್ನು ಮುಂದಿನ ಕ್ರಮದ ಬಗ್ಗೆ 11.50 ಗಂಟೆಗೆ ವಶಕ್ಕೆ ಪಡೆದುಕೊಂಡು ಮಂಗಳೂರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ವೈಧ್ಯಾದಿಕಾರಿಯವರ ಮುಂದೆ ಹಾಜರು ಪಡಿಸಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆರೋಪಿತರು TETRAHYDROCANNABINOL(THC) ಎಂಬ ಗಾಂಜ ಸೇವನೆ ಮಾಡಿರುವುದು ದೃಡಪಟ್ಟಿರುತ್ತದೆ ಎಂಬಿತ್ಯಾದಿ

ಇತ್ತೀಚಿನ ನವೀಕರಣ​ : 04-01-2024 10:05 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080