ಅಭಿಪ್ರಾಯ / ಸಲಹೆಗಳು

Crime report in CEN Crime PS

ದಿನಾಂಕ 05-07-2023 ರಂದು ಯಾರೋ ಅಪರಿಚಿತರ ವ್ಯಕ್ತಿಯು ವಾಟ್ಸಪ್ ನಂಬರ್ +1(626)4772787 ನೇದಿಂದ ಪಿರ್ಯಾದಿದಾರರ ಮೊಬೈಲ್ ನಂಬ್ರ ಗೆ ಆನ್ ಲೈನ್ ಪಾರ್ಟ್ ಟೈಮ್ ಜಾಬ್ ಬಗ್ಗೆ ಮೆಸೇಜ್ ಕಳುಹಿಸಿದ್ದು ಇದನ್ನು ನಂಬಿದ ಪಿರ್ಯಾದಿದಾರರು ಆನ್ ಲೈನ್ ಕೆಲಸ ಮಾಡಬೇಕೆಂಬ ಉದ್ದೇಶದಿಂದ ಅವರ ಸಂದೇಶಕ್ಕೆ ಉತ್ತರಿಸಿದ್ದು ಸದ್ರಿ ಅಪರಿಚಿತರು ಗೂಗಲ್ ಮ್ಯಾಪ್ ಮೂಲಕ ಕೆಲಸ ಮಾಡುವ ಬಗ್ಗೆ J-The New Generation ಎಂಬ ಟೆಲಿಗ್ರಾಂ ಗ್ರೂಪ್ ಗೆ ಸೇರಿಸಿ ಅದರಲ್ಲಿ ಪ್ರಿಪೇಡ್ ಟಾಸ್ಕ್ ಗಳು ಆಡಬೇಕೆಂದು ತಿಳಿಸಿ ಮೊದಲಿಗೆ 150 ರೂ.ಗಳನ್ನು ಪಿರ್ಯಾದಿದಾರರ ಯೂನಿಯನ್ ಬ್ಯಾಂಕ್ ಗೆ ವರ್ಗಾಯಿಸಿ ನಂತರ ಪಿರ್ಯಾದಿದಾರರಿಗೆ ಹಣ ಹೂಡಿಕೆ  ಮಾಡಲು ತಿಳಿಸಿ ಪಿರ್ಯಾದಿದಾರರು ಹೂಡಿಕೆ ಮಾಡಿದ ಕೆಲವು ಮೊತ್ತಗಳಿಗೆ ಹೆಚ್ಚಿನ ಹಣವನ್ನು ಪಿರ್ಯಾದಿದಾರರ ಖಾತೆಗೆ ವರ್ಗಾಯಿಸಿದ್ದು ಇದನ್ನು ಸತ್ಯವೆಂದು ನಂಬಿದ ಪಿರ್ಯಾದಿದಾರರು ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರಬವುದೆಂದು ನಂಬಿ ತಮ್ಮ ಬ್ಯಾಂಕ್ ಖಾತೆಯಿಂದ ಅಪರಚಿತನು ಕಳುಹಿಸಿಕೊಟ್ಟ ವಿವಿದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1,65,800/-ರೂ.ಗಳನ್ನು ಹಣವನ್ನು ವರ್ಗಾಯಿಸಿಕೊಂಡಿರುತ್ತಾರೆ. ಪಿರ್ಯಾದಿದಾರರಿಂದ ಇನ್ನೂ ಹೆಚ್ಚಿನ ಹಣ ಪಾವತಿಸುವಂತೆ ಹೇಳಿದಾಗ ಪಿರ್ಯಾದಿದಾರರು ಹಣ ಪಾವತಿಸಲು ನಿರಾಕರಿಸಿರುತ್ತಾರೆ,ಈ ರೀತಿಯಾಗಿ ಯಾರೋ ಅಪರಿಚಿತ ವ್ಯಕ್ತಿಗಳು ಪಿರ್ಯಾದಿದಾರರಿಗೆ ಆನ್ ಲೈನ್ ಪಾರ್ಟ್ ಟೈಮ್ ಜಾಬ್  ಹೆಸರಿನಲ್ಲಿ ಹಂತ ಹಂತವಾಗಿ ಒಟ್ಟು 1,65,800/-ರೂಗಳನ್ನು ಆನ್ ಲೈನ್ ಮೂಲಕ ಮೋಸದಿಂದ ವರ್ಗಾಯಿಸಿಕೊಂಡು  ಆನ್ ಲೈನ್ ವಂಚನೆ ಮಾಡಿರುವುದಾಗಿದೆ ಎಂಬಿತ್ಯಾದಿ.

Bajpe PS   

ಪಿರ್ಯಾದಿ ಗುರಪ್ಪ ಕಾಂತಿ ಪಿಎಸ್ಐ ಬಜಪೆ ಪೊಲೀಸ್ ಠಾಣೆ ರವರು  ದಿನಾಂಕ 06.07.2023 ರಂದು ರಾತ್ರಿ ಸುಮಾರು 8.30 ಗಂಟೆಗೆ ತೆಂಕ ಎಕ್ಕಾರು ಎಂಬಲ್ಲಿ ರೌಂಡ್ಸ್ ನಲ್ಲಿರುವ ಸಮಯ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಗೋಡು ಗ್ರಾಮದ ನವೀನ್ ಎಂಬಾತನ ಮನೆ ಬಳಿ ಮರದ ಕೆಳಗೆ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವನ್ನಾಗಿಟ್ಟುಕೊಂಡು ಅಂದರ್ –ಬಾಹರ್ ಎಂಬ ಜೂಜಾಟ ಆಡುತಿದ್ದಾರೆಂಬ ಮಾಹಿತಿ ಬಂದ ಮೇರೆಗೆ   ಸದ್ರಿ ಸ್ಥಳದ ಸಮೀಪ ಹೋಗಿ ನೋಡಲಾಗಿ  ಟಾರ್ಚ್ ದೀಪದ ಬೆಳಕಿನಲ್ಲಿ ಸುಮಾರು 7-8 ಜನ ವೃತ್ತಾಕಾರದಲ್ಲಿ ಕುಳಿತು ಹಣವನ್ನು ಪಣವನ್ನಾಗಿಟ್ಟು ಜೂಜಾಟ ಆಡುತ್ತಿರುವುದು ಕಂಡು ಬಂದಿದ್ದು ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವನ್ನಾಗಿಟ್ಟು ಜೂಜಾಟ ಆಡುವುದು ಕರ್ನಾಟಕ ಪೊಲೀಸ್ ಕಾಯ್ದೆ ಯಂತೆ ಅಪರಾಧವಾಗಿದ್ದು  8 ಜನ ಆರೋಪಿಗಳನ್ನು ಸುತ್ತುವರಿದು ಹಿಡಿದು ರೂ 11590/- ನಗದು ಹಣ ವಶಪಡಿಸಿಕೊಂಡು ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿರುವುದು ಎಂಬಿತ್ಯಾದಿ  

ಇತ್ತೀಚಿನ ನವೀಕರಣ​ : 21-08-2023 02:08 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080