ಅಭಿಪ್ರಾಯ / ಸಲಹೆಗಳು

ದೈನಂದಿನ ಅಪರಾಧ ವರದಿ

 

Mangalore East PS

ಈ ಪ್ರಕರಣದ ಸಾರಾಂಶವೇನೆಂದರೆ ಮಂಗಳೂರು ನಗರ ಪೊಲೀಸ್ ಕೇಂದ್ರ ಉಪ ವಿಭಾಗ ವತಿಯಿಂದ ರಚಿಸಲಾಗಿರುವ Anti Drug Team ತಂಡದ ಅಧಿಕಾರಿ ಪೊಲೀಸ್ ಉಪ ನಿರೀಕ್ಷರಾದ ಪ್ರದೀಪ್ ಟಿ ಆರ್ ಉತ್ತರ ಪೊಲೀಸ್ ಠಾಣೆ ರವರು ದಿನಾಂಕ:09-04-2024 ರಂದು ಸಿಬ್ಬಂದಿಯವರೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ಸಮಯ ಬಲ್ಮಠ ಬಳಿ ತಲುಪಿದಾಗ ಒಬ್ಬ ವ್ಯಕ್ತಿ ಅಮಲು ಪದಾರ್ಥ ಸೇವಿಸಿದ ಹಾಗೆ ತೂರಾಡುತ್ತಿದ್ದು, ಅಖಿಲ ಕುಮಾರ ಟಿ ಎಸ್ ಪ್ರಾಯ 27 ತಂದೆ: ಶಶಿಕುಮಾರ ವಾಸ: 6/159 ತಾಯಿಕ್ಕಾಟ್  ಕಲ್ಲುಕೂಟಮ್ ಮನಳಿತರ ತ್ರಿಶೂರ ಕೇರಳ  ಪ್ರಸ್ತುತ ವಾಸ: ಪ್ರಕಾಶ ನಿಲಯ ಬೊನಮಸಾಲಾ ಬಿಲ್ಡಿಂಗ್ ಹತ್ತಿರ ಯೆಯ್ಯಾಡಿ ಮಂಗಳೂರು ಆತನ  ಬಾಯಿಯಿಂದ ಗಾಂಜಾ ಸೇವನೆ ಮಾಡಿದ ವಾಸನೆ ಬರುತ್ತಿದ್ದು,  ಮುಂದಿನ ಕ್ರಮದ ಬಗ್ಗೆ  ಕುಂಟಿಕಾನ ಎ ಜೆ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಕಳುಹಿಸಿಕೊಟ್ಟಿರುತ್ತೇನೆ. ವೈದ್ಯರು ಪರಿಕ್ಷೀಸಿ ಮಾದಕ ವಸ್ತು ಸೇವನೆ ಮಾಡಿರುವ ಬಗ್ಗೆ ವರದಿ ನೀಡಿರುತ್ತಾರೆ. ಅದುದರಿಂದ ಈತನ ವಿರುದ್ದ 27(ಬಿ) NARCOTIC DRUGS AND PSYCHOTROPIC SUBSTANCES ACT 1985 ರಂತೆ ಕಾನೂನು ಕ್ರಮ ಕೈಗೊಂಡಿರುವುದಾಗಿದೆ.

 

 

Kankanady Town PS

ಈ ಪ್ರಕರಣದ ಸಾರಾಂಶವೇನೆಂದರೆ ಪಿರ್ಯಾದಿ Udaya Kumar ಇವರು KA-19-EW-8622 ನೇ ಹೊಂಡಾ ಆಕ್ವೀವಾ ಸ್ಕೂಟರ್ ನ್ನು ಉಪಯೋಗಿಸುತ್ತಿದ್ದು, ದಿನಾಂಕ:03-04-2024 ರಂದು ಮದ್ಯಾಹ್ನ 1-00 ಗಂಟೆಗೆ ಮಂಗಳೂರು ನಗರದ ಆಡು ಮರೋಳಿಯಲ್ಲಿರುವ ಮಾರಿಯಮ್ಮ ದೇವಸ್ಥಾನಕ್ಕೆ ಹೋಗಿ, ದೇವಸ್ಥಾನದ ಎದುರು ಪಾರ್ಕ್ ಮಾಡಿ ದೇವಸ್ಥಾನಕ್ಕೆ ಹೋಗಿದ್ದು ಸಂಜೆ 4-00 ಗಂಟೆಗೆ ಬಂದು ನೋಡಿದಾಗ ಪಾರ್ಕ್ ಮಾಡಿದ ಜಾಗದಲ್ಲಿ ಸ್ಕೂಟರ್ ಇಲ್ಲದಿದ್ದು ನಂತರ ಮಂಗಳೂರು ನಗರದ ಎಲ್ಲಾ ಕಡೆ ಹುಡುಕಾಡಿದ್ದಲ್ಲಿ ಈವರೆಗೆ ಪತ್ತೆಯಾಗಿರುವುದಿಲ್ಲ. ಸ್ಕೂಟರ್ ನ್ನು ದಿನಾಂಕ: 03-04-2024 ರಂದು ಮದ್ಯಾಹ್ನ  1-15 ಗಂಟೆಯಿಂದ ಸಂಜೆ: 4-00 ಗಂಟೆಯ ಮದ್ಯೆ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿದೆ. ಕಳವಾದ ಸ್ಕೂಟರಿನ ಚಾಸಿಸ್ ನಂಬರ್:ME4JF507KHT742811 ಇಂಜಿನ್ ನಂಬರ್: JF50ET5743202 ಆಗಿದ್ದು, ಬಿಳಿ ಬಣ್ಣದ್ದಾಗಿರುತ್ತದೆ. ಕಳವಾದ ಸ್ಕೂಟರ್ ನ ಅಂದಾಜು ಮೌಲ್ಯ: 30,000/- ಆಗಬಹುದು. ಕಳವಾದ  ಸ್ಕೂಟರ್ ನ್ನು ಹುಡುಕಿ ಪತ್ತೆ ಚ್ಚಿ ಕೊಡಬೇಕು ಎಂಬಿತ್ಯಾದಿ.

 

 

ಇತ್ತೀಚಿನ ನವೀಕರಣ​ : 11-04-2024 10:39 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080