ಅಭಿಪ್ರಾಯ / ಸಲಹೆಗಳು

Traffic North Police Station                       

ಪಿರ್ಯಾದಿದಾರರಾದ ಗಿರೀಶ್ (38 ವರ್ಷ) ರವರು ದಿನಾಂಕ; 10-02-2023 ರಂದು ಕೆಲಸದ ನಿಮಿತ್ತ ಸುರತ್ಕಲ್ – ಕಾನಕ್ಕೆ ಹೋಗಿ ಕೆಲಸ ಮುಗಿಸಿಕೊಂಡು ಅವರ ಬಾಬ್ತು KA-19-HA-5794 ನಂಬ್ರದ ಮೊಟಾರ್ ಸೈಕಲಿನಲ್ಲಿ ಸುರತ್ಕಲ್ – ಕಾನ ಕಡೆಯಿಂದ ಮನೆ ಕಡೆಗೆ ಸವಾರಿ ಮಾಡಿಕೊಂಡು ಬರುತ್ತಾ ರಾತ್ರಿ ಸಮಯ ಸುಮಾರು 7:30 ಘಂಟೆಗೆ ರಾಹೆ 66ರ ಉಡುಪಿ- ಮಂಗಳೂರು ರಸ್ತೆಯಲ್ಲಿ ಹೊನ್ನಕಟ್ಟೆ ಜಂಕ್ಷನ್ ಬಳಿ ತಲುಪುತ್ತಿದ್ದಂತೆಯೇ ಪಿರ್ಯಾದಿದಾರರ ಎದುರಿನಲ್ಲಿ KA-70-1179 ನಂಬ್ರದ ಆಟೋ ರಿಕ್ಷಾವನ್ನು ಅದರ ಚಾಲಕ ಉಮರ್ ಫಾರುಕ್ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಯಾವುದೇ ಸೂಚನೇ ನೀಡದೇ ಒಮ್ಮೆಲೇ ಬಲಕ್ಕೆ ಚಲಾಯಿಸಿದ ಪರಿಣಾಮ ಪಿರ್ಯಾದಿದಾರರು ಸವಾರಿ ಮಾಡಿಕೊಂಡು ಹೋಗುತ್ತಿದ್ದ ಮೋಟಾರ್ ಸೈಕಲಿಗೆ ತಾಗಿ ಪಿರ್ಯಾದಿದಾರರು ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದಿದ್ದು ಪರಿಣಾಮ ಪಿರ್ಯಾದಿದಾರರಿಗೆ ಎಡ ಕಣ್ಣಿನ ಹುಬ್ಬಿನ ಬಳಿ ರಕ್ತ ಗಾಯ, ಎಡಕಾಲಿನ ಮೊಣಗಂಟಿನ ಬಳಿ ತರಚಿದ ಗಾಯ ಮತ್ತು ಬಲಕೈ ಮೊಣಗಂಟಿನ ಬಳಿ ಗುದ್ದಿದ ನಮೂನೆಯ ಗಾಯವಾಗಿದ್ದು ಚಿಕಿತ್ಸೆ ಬಗ್ಗೆ ಸುರತ್ಕಲ್ ಪದ್ಮಾವತಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ತೆರಳಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿದೆ ಎಂಬಿತ್ಯಾದಿ ಸಾರಾಂಶ.

Traffic South Police Station  

ಪಿರ್ಯಾದಿ ANIKETH ದಾರರ ಅಣ್ಣನಾದ ಕಾರ್ತಿಕೇಯ ಬಿ.  ರವರು ದಿನಾಂಕ:10-02-2023 ರಂದು ಅವರ ಬಾಬ್ತು ಬೈಕ್ ನಂಬ್ರ KA-19-HF-6509 ನೇದನ್ನು ಸವಾರಿ ಮಾಡಿಕೊಂಡು ಪಡೀಲ್ ಕಡೆಯಿಂದ ಬಿ.ಸಿ ರೋಡ್ ಕಡೆಗೆ ಹೋಗುತ್ತಿರುವಾಗ ಸಮಯ ಸುಮಾರು ರಾತ್ರಿ 09:50 ಗಂಟೆಗೆ ರಾ.ಹೆ-73,ಆಡ್ಯಾರ್ ಕಟ್ಟೆ ಸಮೀಪ ತಲುಪುತ್ತಿದ್ದಂತೆ  ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ರಸ್ತೆಯ ಮಧ್ಯದ ಡಿವೈಡರ್ ಗೆ ಡಿಕ್ಕಿ ಪಡಿಸಿದ ಪರಿಣಾಮ ಬೈಕ್ ಸವಾರನು ಬಿ.ಸಿ ರೋಡ್ ಕಡೆಯಿಂದ ಮಂಗಳೂರು ಕಡೆಗೆ ಬರುವ ಡಾಮಾರು ರಸ್ತೆಗೆ ಬಿದ್ದಿದ್ದು ಆ ಸಮಯ ಅದೇ ರಸ್ತೆಯಲ್ಲಿ ಬರುತ್ತಿದ್ದ ಯಾವುದೋ ಅಪರಿಚಿತ ವಾಹನವೊಂದನ್ನು ಅದರ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿ ಕಾರ್ತಿಕೇಯನ ಮುಖದ ಮೇಲೆ ಹತ್ತಿಸಿಕೊಂಡು ಹೋದ ಪರಿಣಾಮ ಕಾರ್ತಿಕೇಯ ಬಿ.  ರವರ ತಲೆಗೆ, ಮುಖಕ್ಕೆ ಗಂಭೀರ ಸ್ವರೂಪದ ರಕ್ತ ಗಾಯವಾಗಿದ್ದು ಕೂಡಲೇ ಅಲ್ಲಿ ಸೇರಿದ್ದ ಸಾರ್ವಜನಿಕರು ಅವರನ್ನು ಚಿಕಿತ್ಸೆ ಬಗ್ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಬಂದಲ್ಲಿ ಅವರನ್ನು ಪರೀಕ್ಷಿಸಿದ ವೈಧ್ಯರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ, ಎಂಬಿತ್ಯಾದಿ.

Kavoor PS

ದಿನಾಂಕ: 11-02-2023 ರಂದು ಮುಂಜಾನೆ ಸುಮಾರು 04.30 ಗಂಟೆಗೆ ಕೂಳೂರಿನ ಹೆದ್ದಾರಿ ಬಳಿ ಹೆದ್ದಾರಿಯ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗಳ ಪಕ್ಕದಲ್ಲಿ ಕತ್ತಲೆಯಲ್ಲಿ ಶಿವಾನಂದ ಪ್ರಾಯ:19 ವರ್ಷ ವಾಸ: ತೋಳಮಟ್ಟಿ ಗ್ರಾಮ,ಬಿಳಗಿ ತಾಲೂಕು ಬಾಗಲಕೋಟೆ ಜಿಲ್ಲೆ  ಎಂಬಾತನು ಆತನ ಮುಖವನ್ನು ಮರೆಮಾಚಿ ಅನುಮಾನಸ್ಪದವಾಗಿ  ಇರುವವನನ್ನು ಪತ್ತೆ ಹಚ್ಚಿ ವಿಚಾರಸಿಲಾಗಿ ಸಮರ್ಪಕವಾಗಿ ಉತ್ತರಿಸದೇ ಇದ್ದು ಸದ್ರಿ ವ್ಯಕ್ತಿಯು ಯಾವುದೋ ರೀತಿಯ ಬೇವಾರಂಟು ತಕ್ಷೀರು ಮಾಡುವ ಇರಾದೆಯಿಂದ ಇರುವುದರಿಂದ  ಬಲವಾದ ಸಂಶಯಗೊಂಡು ವಶಕ್ಕೆ ಪಡೆದು ಸೂಕ್ತ ಕಾನೂನು ಕ್ರಮ ಕೈಗೊಂಡಿರುದಾಗಿದೆ, ಎಂಬಿತ್ಯಾದಿ.

 

ಇತ್ತೀಚಿನ ನವೀಕರಣ​ : 13-02-2023 01:10 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಗಳೂರು ನಗರ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080